ಬೆಳಗಾವಿ: ಭಾರತ ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಯ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ವಿದ್ಯಾರ್ಥಿಗಳು ಪದವಿಯ ನಂತರ ಸಮಗ್ರ ಜ್ಞಾನ ಪಡೆದುಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯುವ ಮೂಲಕ ಸಾಮಾಜಿಕ-ಆರ್ಥಿಕ-ಶೈಕ್ಷಣಿಕವಾಗಿ ಭಾರತವನ್ನು ಇನ್ನಷ್ಟು ಬಲಿಷ್ಟಗೊಳಿಸಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಹಾಗೂ ಉನ್ನತ ಶಿಕ್ಷಣ, ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎಪಿಜೆ ಅಬ್ದುಲ್ ಕಲಾಂ "ಜ್ಞಾನ ಸಂಗಮ" ಸಭಾಂಗಣದಲ್ಲಿ ಬುಧವಾರ (ಡಿ.3) ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದ ಅವರು, ವಿದ್ಯಾರ್ಥಿ ಜೀವನದ ಅಂತರ ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ ಜ್ಞಾನವಂತ, ಕೌಶಲ್ಯಪೂರ್ಣ ಮತ್ತು ಸಶಕ್ತ ವ್ಯಕ್ತಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಕಾಲಿಡುವ ಮೂಲಕ ಯಶಸ್ಸು ಗಳಿಸಲು ಮುಂದಾಗಬೇಕು ಎಂದು ಹೇಳಿದರು.
ಸ್ವಾತಂತ್ರ್ಯ ಮತ್ತು ನ್ಯಾಯಕ್ಕಾಗಿ ಹೋರಾಡಿದ ಕಿತ್ತೂರಿನ ವೀರ ರಾಣಿ ಹೆಸರಿನ ವಿಶ್ವವಿದ್ಯಾಲಯ ಇದಾಗಿದೆ. ರಾಣಿ ಚನ್ನಮ್ಮ ಎಂದರೆ ಅದಮ್ಯ ರಾಷ್ಟ್ರಪ್ರೇಮ, ಸ್ವಾಭಿಮಾನ ಹಾಗೂ ಸ್ತ್ರೀಶಕ್ತಿ ಸಂಕೇತ, ಬೆಳಗಾವಿ - ವಿಜಯಪುರ ಭಾಗದ ಜನರಿಗೆ ಜ್ಞಾನದ ಬೆಳಕು ಹಂಚುವ ಪಾತ್ರ ವಿಶ್ವವಿದ್ಯಾಲಯ ವಹಿಸಿಕೊಂಡಿದೆ.
ವಿಶ್ವವಿದ್ಯಾಲಯದ ಬೆಳವಣಿಗೆ ಒಂದು ಭಾಗದ ಅಭಿವೃದ್ಧಿ ಮಾತ್ರವಲ್ಲದೆ ರಾಜ್ಯ ಮತ್ತು ರಾಷ್ಟ್ರದ ಶೈಕ್ಷಣಿಕ ಅಭಿವೃದ್ಧಿಪರ ಕೊಡುಗೆಗಳನ್ನು ನೀಡುತ್ತಿದೆ ಎಂದರು.
PublicNext
03/12/2024 06:05 pm