ಬೈಂದೂರು : ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಇರುವ ತೊಂಬತ್ತು ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ನಲ್ಲಿ ಓರ್ವ ವ್ಯಕ್ತಿ ಕಂಠಪೂರ್ತಿ ಕುಡಿದ ಅಮಲಿನಲ್ಲಿ ನಾಲ್ವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿಖಿಲ್ ಪೂಜಾರಿಯನ್ನು ಗಂಗೊಳ್ಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಾರಿನಲ್ಲಿ ಕುಡಿದು ಮಾತಿಗೆ ಮಾತು ಬೆಳೆಸಿ ಜಗಳವಾಡಿಕೊಂಡು ಓರ್ವ ವ್ಯಕ್ತಿ ಬಾರಿನ ಟೇಬಲ್ ಮೇಲಿರುವ ನಿಯರ್ ಬಾಟಲಿ ಒಡೆದು ನಾಲ್ವರ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ವರು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ, ಸಿಬ್ಬಂದಿಗಳಾದ ರಾಘವೇಂದ್ರ ಪಿ. ಸಂದೀಪ್, ನಾಗರಾಜ್ ರವರು ಪರಾರಿಯಾಗಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟಿ ನ್ಯಾಯಾಂಗಕ್ಕೆ ಹಾಜರುಪಡಿಸಿದ್ದಾರೆ.
Kshetra Samachara
03/12/2024 06:48 pm