ಬಂಗಾರಪೇಟೆ: ಬಂಗಾರಪೇಟೆ ಪೊಲೀಸರಿಂದ ಅಪರಾಧಗಳನ್ನು ತಡೆಗಟ್ಟುವ ಕುರಿತು ಜನಜಾಗೃತಿ ಕಾರ್ಯಕ್ರಮ ಸಾರ್ವಜನಿಕ ಸಂಪರ್ಕದೊಂದಿಗೆ ನಡೆಯಿತು. ಬಂಗಾರಪೇಟೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಸದ್ಯಸರುಗಳು, ಹಾಗೂ ಸಾರ್ವಜನಿಕರುಗಳಿಗೆ ಅಪರಾಧಗಳನ್ನು ತಡೆಗಟ್ಟುವ ಕುರಿತು ಬಂಗಾರಪೇಟೆ ಪೊಲೀಸ್ ಇನ್ಸ್ಪೆಕ್ಟರ್ ಆರ್.ದಯಾನಂದ ಅವರು ಪೊಲೀಸ್ ಠಾಣೆಯಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಮಾತನಾಡಿದರು, ಅಪರಾಧಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸಮಾಜದಲ್ಲಿ ಅಪಘಾತಗಳನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರ ಅತ್ಯವಶ್ಯಕವಾಗಿದೆಯೆಂದರು.
ಸಾರ್ವಜನಿಕರು, ಯುವಕರು, ಮಹಿಳೆಯರು ಮನೆಗಳ್ಳತನ, ಸರಗಳ್ಳತನದ ಬಗ್ಗೆ ಎಚ್ಚರದಿಂದಿರಲು, ಅಪ್ರಾಪ್ತರಿಂದ ವಾಹನ ಚಾಲನೆ, ಮಾದಕ ವಸ್ತುಗಳಿಂದ ಆಗುವಂತಹ ಅನಾಹುತಗಳ ಬಗ್ಗೆ, ಸೈಬರ್ ಅಪರಾಧಗಳ ಬಗ್ಗೆ, ಪೋಕ್ಸೋ ಕಾಯ್ದೆಯ ಕುರಿತು, ಬಾಲ್ಯ ವಿವಾಹ ನಿರ್ಮೂಲನೆ, ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಕುರಿತು ಕಾನೂನು ಅರಿವು ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.
Kshetra Samachara
03/12/2024 07:23 pm