ಹಿರಿಯೂರು: ಚಲಿಸುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾದ ಪರಿಣಾಮ ಒರ್ವ ರೈತ ಸಾವನ್ನಪ್ಪಿರುವ ಘಟನೆ ಜರುಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಟೋಲ್ ಸಮೀಪದಲ್ಲಿ ನಡೆದಿದ್ದು, ಡಿಸೆಂಬರ್ 3ರ ಸಂಜೆ 7 ಗಂಟೆಗೆ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನ 45 ವರ್ಷದ ರಂಗಪ್ಪ ಎಂದು ಗುರುತಿಸಲಾಗಿದೆ. ಮ್ಯಾಕ್ಲೋರಹಳ್ಳಿಯಿಂದ ಹೂ ತೆಗೆದುಕೊಂಡು ಹಿರಿಯೂರು ಮಾರುಕಟ್ಟೆಗೆ ತೆರಳುತ್ತಿದ್ದ ಸಂಧರ್ಭದಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಐಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
03/12/2024 07:44 pm