ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್: ಯತ್ನಾಳ್ ಶಾಸಕ ಸ್ಥಾನ ರದ್ದುಪಡಿಸುವಂತೆ ಆಗ್ರಹಿಸಿ ಲಿಂಗಾಯತ ಸಮಾಜದಿಂದ ಪ್ರತಿಭಟನೆ

ಬೀದರ್: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಕ್ಷ ಮತ್ತು ಸರಕಾರದ ವತಿಯಿಂದ ಲಿಂಗಾಯತ ಮೀಸಲಾತಿ ಅಡಿಯಲ್ಲಿ ಯಾವುದೇ ಸೌಲಭ್ಯ ನೀಡಬಾರದು ಎಂದು ಬೆಂಗಳೂರು ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಡಾ.ಚನ್ನಬಸವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

ಮಂಗಳವಾರ ನಗರದಲ್ಲಿ ಯತ್ನಾಳ್ ಹೇಳಿಕೆ ಖಂಡಿಸಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ಶಾಸಕ ಬಸನಗೌಡ ಯತ್ನಾಳ್ ಅವರು ಅವಹೇಳನಕಾರಿ ಮಾತುಗಳಾಡಿದ್ದಾರೆ. ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಅವರ ವಿರುದ್ಧ ಕಾನೂನಿನ ಮೂಲಕ ಶಿಸ್ತು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ವಿಶ್ವಗುರು ಬಸವಣ್ಣನವರು ಹೊಳೆಗೆ ಹಾರಿ ಪ್ರಾಣಬಿಟ್ಟರು ಎಂಬ ಆಧಾರರಹಿತ ಸುಳ್ಳನ್ನು ತಮ್ಮ ಭಾಷಣದಲ್ಲಿ ಬಳಸಿ ಬಸವಣ್ಣನವರು ಓರ್ವ ಹೇಡಿಯಾಗಿದ್ದರು ಎನ್ನುವ ಅರ್ಥದಲ್ಲಿ ಅವರು ಮಾತನಾಡಿದ್ದಾರೆ. ಬಸವಣ್ಣನವರಿಗೆ ಅವಮಾನ ಮಾಡುವ ಕೆಲಸ ಮಾಡಿದ್ದಾರೆ. ಇದು ಲಿಂಗಾಯತರ ಮನಸ್ಸಿಗೆ ನೋವುಂಟು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಬೀದರ್ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಕ್ರಾಂತಿಗಂಗೋತ್ರಿ ಅಕ್ಕನಾಗಲಾಂಬಿಕ ಮಹಿಳಾಗಣ, ಬಸವ ಕೇಂದ್ರ ಬಸವ ಬಳಗ, ಬಸವ ಸೇವಾ ಪ್ರತಿಷ್ಠಾನ ಬಸವಪರ ಸಂಘಟನೆಗಳು, ಸಂಘ ಸಂಸ್ಥೆಗಳ ಅನುಯಾಯಿಗಳು ಭಾಗವಹಿಸಿದ್ದರು.

Edited By : Vijay Kumar
PublicNext

PublicNext

03/12/2024 07:45 pm

Cinque Terre

12.49 K

Cinque Terre

2

ಸಂಬಂಧಿತ ಸುದ್ದಿ