ವಿರಾಜಪೇಟೆ: ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿರಾಜಪೇಟೆ-ಸಿದ್ದಾಪುರ ರಸ್ತೆಯ ಮಗ್ಗುಲ ಜಂಕ್ಷನ್ ಬಳಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆ ನೆಹರು ನಗರದ ನಿವಾಸಿ ಅಲಿಂ ಮೊಹಮ್ಮದ್ (41) ಎಂಬಾತನನ್ನು ಬಂಧಿಸಿ 1 ಕೆಜಿ 88 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಖಚಿತ ಮಾಹಿತಿ ದೊರೆತ ಹಿನ್ನೆಲೆ ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಪೊಲೀಸ್ ಅಧಿಕಾರಿಗಳ ಕಾರ್ಯದಕ್ಷತೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Kshetra Samachara
03/12/2024 08:03 pm