ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: 'ವಿಶೇಷಚೇತನರು ಸಾಧನೆಯತ್ತ ಗಮನಹರಿಸಿ'

ಕೊಡಗು: ವಿಶೇಷಚೇತನರು ವಿಕಲತೆ ಇದೆ ಎಂದು ಕೊರಗದೆ ಸಾಧನೆಯತ್ತ ಮುನ್ನಡೆಯಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಸಲಹೆ ಮಾಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಜನ ಸೇವಾ ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯುವ ಸಂಘ, ಕೊಡಗು ಶಾಖೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಮಕ್ಕಳ ಶಾಲೆಗಳು ಇವರ ಸಂಯುಕ್ತ ಆಶ್ರಯದಲ್ಲಿ ‘ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ’ ಎಂಬ ಘೋಷವಾಕ್ಯದೊಂದಿಗೆ ನಗರದ ಓಂಕಾರ ಸದನದಲ್ಲಿ ಮಂಗಳವಾರದ ನಡೆದ ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕೆಲವರು ಹುಟ್ಟಿನಿಂದಲೇ ವಿಶೇಷಚೇತನರಾಗುತ್ತಾರೆ. ಆದ್ದರಿಂದ ಧೃತಿಗೆಡದೆ ಆರೋಗ್ಯ, ಶಿಕ್ಷಣದತ್ತ ಗಮನಹರಿಸಿ ಹೆಚ್ಚಿನ ಸಾಧನೆ ಮಾಡಲು ಪ್ರಯತ್ನಿಸಬೇಕು ಎಂದು ಶುಭ ಹೇಳಿದರು.

Edited By : Vijay Kumar
Kshetra Samachara

Kshetra Samachara

03/12/2024 08:03 pm

Cinque Terre

360

Cinque Terre

0

ಸಂಬಂಧಿತ ಸುದ್ದಿ