ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಗರಗ ಗ್ರಾಮದಲ್ಲಿ ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ

ಧಾರವಾಡ: ಹಾಡಹಗಲೇ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಸಂಭವಿಸಿದೆ.

ಗರಗ ಗ್ರಾಮದ ಗಿರೀಶ ಕರಡಿಗುಡ್ಡ ಎಂಬುವವರೇ ಹತ್ಯೆಗೀಡಾದವರು.

ಹತ್ಯೆ ಮಾಡಿದವರು ಯಾರು? ಯಾವ ಉದ್ದೇಶಕ್ಕಾಗಿ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಗಿರೀಶ ಅವರು ಸಣ್ಣ ಪುಟ್ಟ ರಿಯಲ್ ಎಸ್ಟೇಟ್ ಕೆಲಸ ಹಾಗೂ ಕಾರುಗಳನ್ನು ಕೊಡಿಸುವ ಮತ್ತು ತೆಗೆದುಕೊಳ್ಳುವ ಕೆಲಸ ಮಾಡುತ್ತಿದ್ದರು ಎಂದು ಗೊತ್ತಾಗಿದೆ.

ಮಂಗಳವಾರ ಮಧ್ಯಾಹ್ನ ಗಿರೀಶ ತಮ್ಮ ಮನೆ ಮುಂದೆ ಬೈಕ್ ನಿಲ್ಲಿಸಿ ಒಳಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಗಿರೀಶ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.

ಘಟನೆ ನಡೆದ ಕೆಲ ಗಂಟೆಗಳ ನಂತರ ಗಿರೀಶ ಅವರ ಕೊಲೆಯಾಗಿರುವುದು ಅವರ ಪತ್ನಿಗೆ ಗೊತ್ತಾಗಿದೆ. ಕೂಡಲೇ ಅವರು ಗರಗ ಠಾಣೆಗೆ ದೂರು ನೀಡಿದ್ದು, ಸದ್ಯ ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಮತ್ತು ಡಿವೈಎಸ್‌ಪಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

03/12/2024 08:38 pm

Cinque Terre

111.43 K

Cinque Terre

0

ಸಂಬಂಧಿತ ಸುದ್ದಿ