ಮೈಸೂರು : ಫೆಂಗಲ್ ಚಂಡಮಾರುತದಿಂದ ನಿರಂತರವಾಗಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಮೈಸೂರಿನಲ್ಲಿ ಸಮಸ್ಯೆ ಎದುರಾಗಿದೆ. ಒಂದು ಕಡೆ ಮರ ಉರುಳಿ ಬಿದ್ದು ಕಾರು ಜಖಂ ಆದ್ರೆ, ಇತ್ತ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿದು ರಸ್ತೆಯಲ್ಲಿ ಬೃಹತ್ ಗಾತ್ರದ ಬಂಡೆ ಉರುಳಿ ಬಿದ್ದಿದೆ.
ಹೌದು, ಚಾಮುಂಡೇಶ್ವರಿ ದೇಗುಲಕ್ಕೆ ತೆರಳುವ ಮಾರ್ಗ ಮಧ್ಯೆ ಬೃಹತ್ ಬಂಡೆಗಳು ಉರುಳಿ ಬಿದ್ದಿದೆ. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಿಬ್ಬಂದಿ ಸಹಾಯದಿಂದ ಬಂಡೆ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ರು. ಅದೃಷ್ಟವಶಾತ್ ಬಂಡೆ ಬೀಳುವ ವೇಳೆ ಯಾವುದೇ ವಾಹನ ಇಲ್ಲದಿರುವುದು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.
PublicNext
03/12/2024 08:52 pm