ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಡಿಸೆಂಬರ್‌ 4ರಂದು ಹುಬ್ಬಳ್ಳಿಗೆ ರಿಯಲ್ ಸ್ಟಾರ್ ಉಪೇಂದ್ರ

ಹುಬ್ಬಳ್ಳಿ: ಯುಐ ಚಿತ್ರದ ಪ್ರಚಾರಕ್ಕಾಗಿ ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್ ಅವರು ನಾಳೆ ಡಿಸೆಂಬರ್4 ಕ್ಕೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಎಂದು ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘ ಹಾಗೂ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಅಭಿಮಾನಿಗಳ ಸಂಘದ ಅಧ್ಯಕ್ಷ ವಿಜಯಕುಮಾರ್ ಅಪ್ಪಾಜಿ ಹೇಳಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮುಂಜಾನೆ 10 ಗಂಟೆಗೆ ಹುಬ್ಬಳ್ಳಿ ವಿದ್ಯಾನಗರದ ಬಿವಿಬಿ ಕಾಲೇಜಿನಲ್ಲಿ ಮಾದಕ ವ್ಯಸನ ಜಾಗೃತಿ ಅಭಿಯಾನ, ನಂತರ ಶಿರೂರ ಪಾರ್ಕ್‌ನ ತೋಳನಕೆರೆವರೆಗೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಚಿತ್ರದ ಪ್ರಚಾರ ನಡೆಯಲಿದೆ. ಈ ಸಂದರ್ಭದಲ್ಲಿ ಉತ್ತರ ಕರ್ನಾಟಕದ ವಿವಿಧ ಜನಪರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

Edited By : Manjunath H D
Kshetra Samachara

Kshetra Samachara

03/12/2024 08:57 pm

Cinque Terre

14.51 K

Cinque Terre

1

ಸಂಬಂಧಿತ ಸುದ್ದಿ