ಚಿಕ್ಕೋಡಿ: ನೇಣು ಬಿಗಿದುಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕೋಡಿ ಹೊರವಲಯದ ಖಾಸಗಿ ಪಿಜಿಯಲ್ಲಿ ನಡೆದಿದೆ.
ಶಶಾಂಕ ಬಟಕೋಳಿ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಶಶಾಂಕ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಂಬಗಿ ಗ್ರಾಮದ ವಿದ್ಯಾರ್ಥಿ. ಈತ ಚಿಕ್ಕೋಡಿ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ಎಲ್‌ಎಲ್‌ಬಿ ವ್ಯಾಸಂಗ ಮಾಡುತ್ತಿದ್ದನು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
03/12/2024 08:59 pm