ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಸಿಎಂ ಸಿದ್ದರಾಮಯ್ಯ ಕೈ ಬಲಪಡಿಸಲು ಡಿಸೆಂಬರ್‌ 5ರಂದು ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶ

ಶೋಷಿತ ಸಮುದಾಯಗಳ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಕ್ಕಿಳಿಸಿ, ಅವರ ಧ್ವನಿ ಅಡಗಿಸಬೇಕು ಎನ್ನುವ ವಿರೋಧ ಪಕ್ಷಗಳ ಷಡ್ಯಂತ್ರವನ್ನು ಜನರ ಮುಂದೆ ತರುವ ಮೂಲಕ, ಅವರಲ್ಲಿ ಜಾಗೃತಿ ಮೂಡಿಸಿ ಮುಖ್ಯಮಂತ್ರಿಗಳ ಕೈ ಬಲಪಡಿಸುವ ಚಿಂತನೆಗಳಡಿ ಡಿಸೆಂಬರ್‌ 5ರಂದು ಹಾಸನದಲ್ಲಿ ‘ಸ್ವಾಭಿಮಾನಿ' ಸಮಾವೇಶವನ್ನು ಆಯೋಜಿಸಿರುವುದಾಗಿ ಕಾಂಗ್ರೆಸ್ ಮುಖಂಡ ಜೆಜೆ ಆನಂದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪ್ರಗತಿಪರ ಸಂಘಟನೆಗಳ ಪರವಾಗಿ ಮಾತನಾಡಿದ ಅವರು, ಕಳೆದ ನಾಲ್ಕು ದಶಕಗಳಿಗಿಂತಲೂ ಹೆಚ್ಚಿನ ಕಾಲ ನಿಷ್ಕಳಂಕ ರಾಜಕಾರಣ ಮಾಡುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿ, ಹಿಂದುಳಿದ, ದಲಿತ, ಶೋಷಿತ ಸಮುದಾಯದ ಶಕ್ತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ದ್ವಿತೀಯ ಅವಧಿಗೆ ಮುಖ್ಯ ಮಂತ್ರಿಯಾಗಿ ಆಯ್ಕೆಯಾದ ಬಳಿಕ ವಿವಿಧ ಯೋಜನೆಗಳ ಮೂಲಕ ಸಮಾಜದ ಎಲ್ಲಾ ಸ್ತರಗಳ ಜನರ ಅಭ್ಯಯದಯಕ್ಕೆ ಸಿದ್ದರಾಮಯ್ಯ ಶ್ರಮಿಸುತ್ತಿದ್ದಾರೆ. ಇದೇ ರೀತಿಯಲ್ಲಿ ಇವರು ತಮ್ಮ ಅತ್ಯುತ್ತಮವಾದ ಆಡಳಿತವನ್ನು ಮುಂದುವರಿಸಿದಲ್ಲಿ ತಮ್ಮ ಅಸ್ತಿತ್ವಕ್ಕೆ ಧಕ್ಕೆ ಉಂಟಾದೀತೆನ್ನುವ ಆತಂಕದಿಂದ ಇದೀಗ ವಿರೋಧ ಪಕ್ಷಗಳು ಮುಡಾ, ವಾಲ್ಮೀಕಿ ಪ್ರಕರಣಗಳನ್ನು ಮುಂದಿಟ್ಟು ಷಡ್ಯಂತ್ರ ರೂಪಿಸುತ್ತಿರುವುದಾಗಿ ಆರೋಪಿಸಿದರು.

Edited By : Manjunath H D
PublicNext

PublicNext

03/12/2024 08:59 pm

Cinque Terre

19.7 K

Cinque Terre

0

ಸಂಬಂಧಿತ ಸುದ್ದಿ