ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದ ಕೆಲಸ ಖಾಯಂಗೆ ಆಗ್ರಹಿಸಿ ಕಸ ಸಾಗಿಸುವ ಆಟೋ ಲಾರಿ ಚಾಲಕರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ನಿನ್ನೆಯಿಂದ ಬೆಂಗಳೂರಿನಲ್ಲಿ ಕಸ ಸಂಗ್ರಹ ಮಾಡುವ ಆಟೋಗಳು, ಲಾರಿಗಳ ಸಂಚಾರ ಬಂದ್ ಆಗಿದ್ದು, ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಈ ವಿಚಾರದ ಬಗ್ಗೆ ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಫ್ರೀಡಂ ಪಾರ್ಕಿಗೆ ಭೇಟಿ ನೀಡಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದ್ದಾರೆ. ಹಿಂದೆ ಇದ್ದ ಬಿಜೆಪಿ ಸರ್ಕಾರ ಕೂಡ ನಿಮ್ಮನ್ನು ಖಾಯಂ ಮಾಡ್ತೀವಿ ಅಂತ ಭರವಸೆ ಕೊಟ್ಟಿದ್ರು, ನಿಮ್ಮ ಕೆಲಸ ಕಾರ್ಯಗಳು ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ. ಆದರೂ ಇದರ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡ್ತೀನಿ ಎಂದು ಹೇಳಿದರು.
ಆದರೂ ಕೂಡ ಕಸದ ಲಾರಿ ಚಾಲಕರು ಮುಷ್ಕರ ಕೈ ಬಿಡಲಿಲ್ಲ. ಡಿಸಿಎಂ ಮನವಿ ಸ್ವೀಕರಿಸಿದ್ದಾರೆ ಆದರೆ ಸರಿಯಾದ ಮಾಹಿತಿ ನೀಡಲಿಲ್ಲ. ಈ ನೆಲೆಯಲ್ಲಿ ನಾವು ಯಾವುದೇ ಕಾರಣಕ್ಕೂ ಮುಷ್ಕರ ಬಿಡುವುದಿಲ್ಲ, ಬೆಂಗಳೂರಲ್ಲಿ ಕಸವನ್ನು ಹೇಗೆ ಎತ್ತುತ್ತಾರೆ ಎಂದು ಸರ್ಕಾರಕ್ಕೆ ಚಾಲೆಂಜ್ ಹಾಕಿದ್ದಾರೆ ಸಂಘದ ಅಧ್ಯಕ್ಷ ತ್ಯಾಗರಾಜ್.
PublicNext
03/12/2024 09:24 pm