ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಮಡಿಕೇರಿ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಸಂಘದ ವಾರ್ಷಿಕ ಮಹಾಸಭೆ

ಕೊಡಗು: ಮಡಿಕೇರಿ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಸಿ.ಯು ಪವಿತ್ರ ಅಧ್ಯಕ್ಷತೆಯಲ್ಲಿ ಮಡಿಕೇರಿಯಲ್ಲಿ ಯಶಸ್ವಿಯಾಗಿ ನಡೆಯಿತು.

ಮಡಿಕೇರಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷ ಜಿ.ಆರ್. ಶಿವಶಂಕರ್ ಅವರು ಉದ್ಘಾಟಿಸಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಅತಿ ಕಡಿಮೆ ಗೌರವಧನ ಪಡೆದುಕೊಂಡು ಹೆಚ್ಚಿನ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ನಿವೃತ್ತಿ ವೇತನ ಪಿಂಚಣಿ ಹಾಗೂ ಆರೋಗ್ಯ ವಿಮೆ ಯೋಜನೆಯ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಹಿಳಾ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷೆ ಹಾಗೂ ಮಾಜಿ ಮೂಡ ಅಧ್ಯಕ್ಷ ಸುರಯ್ಯ ಅಬ್ರಾರ್ ಅವರು ಮಾತನಾಡಿ, ಒಗ್ಗಟ್ಟಿನಿಂದ ಇದ್ದರೆ ಮಾತ್ರ ಅದಕ್ಕೆ ಬಲವಿದೆ. ಸಂಘಟನೆ ಯಿಂದ ಉತ್ತಮ ಕಾರ್ಯಕರ್ತೆ ಸಹಾಯಕಿಯರನ್ನು ಗುರುತಿಸಿ ಸನ್ಮಾನಿಸಿದ್ದು ಶ್ಲಾಘನೀಯ.

ಬೈಟ್: ಜಿ.ಆರ್. ಶಿವಶಂಕರ್, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷ

Edited By : Manjunath H D
Kshetra Samachara

Kshetra Samachara

03/12/2024 09:29 pm

Cinque Terre

860

Cinque Terre

0

ಸಂಬಂಧಿತ ಸುದ್ದಿ