ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಈ ಹಿಂದೆ ಪ್ರಾಸಿಕ್ಯೂಷನ್‌ಗೆ ಅನುಮತಿ ತಿರಸ್ಕರಿಸಿದ್ದರು. ಆದ್ರೆ ಇದೀಗ ಮತ್ತೆ ಪುನರ್ ಪರಿಶೀಲನೆಗಾಗಿ ರಾಜ್ಯಪಾಲರಿಗೆ ಕಳುಹಿಸಲು ಸಂಪುಟ ಸಭೆ ತೀರ್ಮಾನಿಸಿತ್ತು. ಸಂಪುಟ ಸಭೆಯ ತೀರ್ಮಾನದಂತೆ ರಾಜ್ಯ ಸರ್ಕಾರ ರಾಜ್ಯಪಾಲರಿಗೆ ನಿರ್ಣಯ ರವಾನಿಸಿದೆ.
ಯಡಿಯೂರಪ್ಪ ಹಗರಣಗಳಿಗೆ ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಕೋರಿ ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದೆ. ಈಗ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡ್ತಾರಾ ಕಾದು ನೋಡಬೇಕಿದೆ.
ಯಡಿಯೂರಪ್ಪ ಮೇಲೆ ಏನು ಪ್ರಕರಣ ಅಂತ ನೋಡೋದಾದ್ರೆ ಎಂಎಸ್ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಅಕ್ರಮ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಟಿಜೆ ಅಬ್ರಹಾಂ ದೂರು ನೀಡಿದ್ದರು. 2020ರ ನ.19ರಂದು ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಎಸಿಬಿಗೆ ದೂರು ನೀಡಿದ್ದರು. PMLA ಕಾಯ್ದೆ ಅಡಿ ದೂರು ನೀಡಿ ತನಿಖೆ ನಡೆಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಆದ್ರೆ, ಅಂದು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ನಿರಾಕರಿಸಿದ್ದರು. ಇದೀಗ ಅದನ್ನು ಮತ್ತೆ ಪುನರ್ ಪರಿಶೀಲನೆಗೆ ರಾಜ್ಯಪಾಲರಿಗೆ ರಾಜ್ಯ ಸರ್ಕಾರ ಕಳುಹಿಸಿಕೊಟ್ಟಿದೆ.
PublicNext
03/12/2024 09:45 pm