ಬೆಂಗಳೂರು : ಕೆಎಮ್ಎಫ್ (KMF) ನೂತನ ಎಂಡಿಯಾಗಿ ಬಿ.ಶಿವಸ್ವಾಮಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಿ ಶಿವಸ್ವಾಮಿ, ಕೆ.ಎ.ಎಸ್ (ಸೂಪರ್ ಟೈಂ ಸೈಲ್) ಅಧಿಕಾರಿ, ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ, ವಿಧಾನ ಸೌಧ, ಬೆಂಗಳೂರು ಇವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಹಾಲು ಮಹಾಮಂಡಳಿ (KMF), ಬೆಂಗಳೂರು ಎಂ.ಕೆ ಜಗದೀಶ್ ಇವರ ಸ್ಥಾನಕ್ಕೆ ವರ್ಗಾಯಿಸಿ ಆದೇಶಿಸಿದೆ.
ಎಂ.ಕೆ ಜಗದೀಶ್ ಅವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
PublicNext
03/12/2024 10:20 pm