ಧಾರವಾಡ: ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ಪ್ರವೇಶಾತಿ ನೀಡುತ್ತಿಲ್ಲ ಎಂದು ಆರೋಪಿಸಿ ನೂರಾರು ವಿದ್ಯಾರ್ಥಿಗಳು ಧಾರವಾಡದ ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಕಚೇರಿ ಎದುರು ದಿಢೀರ್ ಪ್ರತಿಭಟನೆ ನಡೆಸಿದರು.
ಹಾಸ್ಟೆಲ್‌ಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಎಷ್ಟೇ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದರೂ ಪ್ರವೇಶ ನೀಡಬೇಕು ಎಂಬ ನಿಯಮವಿದ್ದು, ಆ ನಿಯಮವನ್ನು ಸಮಾಜ ಕಲ್ಯಾಣ ಇಲಾಖೆ ಉಲ್ಲಂಘಿಸಿ ಪ್ರತಿನಿತ್ಯ ವಿದ್ಯಾರ್ಥಿಗಳು ಕಚೇರಿಗೆ ಅಲೆದಾಡುವಂತೆ ಮಾಡುತ್ತಿದೆ.
ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ಎದುರು ಪ್ರತಿಭಟನೆ ನಡೆಸಿದರು. ಈ ವಿದ್ಯಾರ್ಥಿಗಳ ಮನವೊಲಿಸಲು ಪೊಲೀಸರು ಪ್ರಯತ್ನಿಸಿದರಾದರೂ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಡಲಿಲ್ಲ. ನಂತರ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಹಾಸ್ಟೆಲ್‌ಗೆ ಪ್ರವೇಶ ನೀಡುವ ಭರವಸೆ ನೀಡಿದ ನಂತರವೇ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆ ಕೈ ಬಿಟ್ಟರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/12/2024 10:29 pm