ಪಂಜಾಬ್ : ಅಮೃತಸರದ ಗೋಲ್ಡನ್ ಟೆಂಪಲ್ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಮತ್ತು ಪಂಜಾಬ್ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾರೆ. ನಾರಯಣ್ ಸಿಂಗ್ ಚೌರಿನಿಂದ ಹತ್ಯಗೆ ಯತ್ನಿಸಲಾಗಿದೆ.
ಸ್ಥಳದಲ್ಲಿದ್ದ ಜನರು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದು, ಆತನನ್ನು ಬಂಧಿಸಿದ್ದಾರೆ. ಧಾರ್ಮಿಕ ಶಿಕ್ಷೆಯ ಭಾಗವಾಗಿ ಸೇವೆ ಸಲ್ಲಿಸುತ್ತಿದ್ದಾಗ ಬಾದಲ್ ಮೇಲೆ ದಾಳಿ ನಡೆಸಲಾಯಿತು. ಮಾಹಿತಿ ಪ್ರಕಾರ ದಾಳಿಯಿಂದ ಬಾದಲ್ ಸ್ವಲ್ಪದರಲ್ಲೇ ಪಾರಾಗಿದ್ದು, ಸುರಕ್ಷಿತವಾಗಿದ್ದಾರೆ.
PublicNext
04/12/2024 10:24 am