ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಶಾಲಾ-ಕಾಲೇಜು ಬಳಿ ತಂಬಾಕು ಉತ್ಪನ್ನ ಮಾರಾಟ ವಿರುದ್ಧ ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ನೂರು ಮೀ. ವ್ಯಾಪ್ತಿಯೊಳಗೆ ಯಾವುದೇ ಅಂಗಡಿ, ಹೋಟೆಲ್‌ಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಂಡು ಅವರ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮ ದಡಿಯಲ್ಲಿ ಕೋಟ್ಪಾ-2003 ಕಾಯ್ದೆ ಕುರಿತ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು

ಕಳೆದ ಜಿಲ್ಲಾ ತಂಬಾಕು ನಿಯಂತ್ರಣ ಹಾಗೂ ಕೋಟ್ಪಾ ಕಾಯಿದೆ ಅನುಷ್ಠಾನ ಸಭೆಯಲ್ಲಿ ಶಾಲಾ- ಕಾಲೇಜುಗಳ ವ್ಯಾಪ್ತಿಯ ನೂರು ಮೀ. ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದಲ್ಲಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೆ. ಆದರೆ ಬೈಂದೂರು ತಾಲೂಕಿನ ನಾವುಂದ, ಶಿರೂರು, ಹಕ್ಕಾಡಿ, ಉಪ್ಪುಂದ ಗ್ರಾಪಂಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದರೂ ಸಹ ಬರಿ ಎಚ್ಚರಿಕೆ ಹಾಗೂ ತಿಳುವಳಿಕೆ ನೋಟಿಸ್‌ನ್ನು ನೀಡಲಾಗಿದೆ. ಇದು ಸರಿಯಲ್ಲ. ಅಂತಹವರ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

Edited By : PublicNext Desk
Kshetra Samachara

Kshetra Samachara

04/12/2024 12:03 pm

Cinque Terre

920

Cinque Terre

1

ಸಂಬಂಧಿತ ಸುದ್ದಿ