ಕೊಡಗು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ಕೊಡಗು ಜಿಲ್ಲೆಯಲ್ಲಿಯೂ ವ್ಯಾಪಕ ಮಳೆಯಾಗಿದೆ. ಕಳೆದ ಮೂರು ದಿನಗಳಿಂದಲೇ ಜಿಲ್ಲೆಯಾದ್ಯಂತ ಮಳೆಗಾಲದ ಮಾದರಿಯ ಸನ್ನಿವೇಶ ಕಂಡು ಬಂದಿದೆ. ಕಳೆದ ಎರಡು ದಿನಗಳಿಂದ ದಿನವಿಡೀ ಮಳೆಯಾಗಿದ್ದು, ಮಳೆಯೊಂದಿಗೆ ಚಳಿಯ ಅನುಭವವು ಆಗುತ್ತಿದೆ. ಇಂದು ಮುಂಜಾನೆಯಿಂದಲೆ ಮಳೆ ಆರಂಭವಾಗಿದೆ.
ಅಕಾಲಿಕ ಮಳೆಯಿಂದ ಕೊಡಗಿನ ರೈತರು ಕಂಗಲಾಗಿದ್ದು ಅಕಾಲಿಕ ಮಳೆಗೆ ಹಿಡಿ ಶಾಪ ಹಾಕುತ್ತಿದಾರೆ. ಇನ್ನೇರಡು ದಿನ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Kshetra Samachara
04/12/2024 12:22 pm