ಕೊಡಗು : ಸಂವಿಧಾನ ಓದು ಅಭಿಯಾನವು ನಾಡಿನಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಡಿ.7 ಮತ್ತು 8 ರಂದು ಮಡಿಕೇರಿಯಲ್ಲಿ ಸಂವಿಧಾನ ಓದುವ ಅಧ್ಯಯನ ಶಿಬಿರ ನಡೆಯಲಿದೆ ಎಂದು ಅಭಿಯಾನದ ರಾಜ್ಯ ಕೇಂದ್ರ ಸಂಯೋಜಕ ವಿ.ರಾಜಶೇಖರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅಂಬೇಡ್ಕರ್ ಭವನದಲ್ಲಿ ಎರಡು ದಿನಗಳು ನಡೆಯಲಿರುವ ಅಭಿಯಾನದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಪ್ರತಿನಿಧಿಸಿ, ಸ್ನಾತ್ತಕೋತ್ತರ ವಿದ್ಯಾರ್ಥಿಗಳು, ಸಾಮಾಜಿಕ-ಸಾಂಸ್ಕೃತಿಕ ಹಾಗೂ ಪ್ರಗತಿಪರ ಆಶಯವುಳ್ಳ 200 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
PublicNext
04/12/2024 12:29 pm