ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಡಿಸೆಂಬರ್ 11 ರಿಂದ 15 ರವರೆಗೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು : ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಭಜರಂಗದಳ ಮತ್ತು ವಿಶ್ವ ಹಿಂದೂ ​ಪರಿಷತ್​ ನೇತೃತ್ವದ 25ನೇ ವರ್ಷದ ದತ್ತಜಯಂತಿ ಆಚರಣೆಗೆ ಚಾಲನೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಚಂದ್ರದ್ರೋಣ ಪರ್ವತದ ಸಾಲಿನ ಪ್ರವಾಸಿ ತಾಣಗಳಲ್ಲಿ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಗಾಳಿಕೆರೆ, ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಪ್ರವಾಸಿಗರು ಭೇಟಿ ನೀಡುವುದನ್ನು ಡಿಸೆಂಬರ್​ 11ರ ಬೆಳಗ್ಗೆ 6 ರಿಂದ ಡಿಸೆಂಬರ್​15ರ ಬೆಳಗ್ಗೆ 10 ಗಂಟೆವರೆಗೂ ನಾಲ್ಕು ದಿನಗಳ ಕಾಲ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Edited By : PublicNext Desk
PublicNext

PublicNext

04/12/2024 12:53 pm

Cinque Terre

9.86 K

Cinque Terre

0

ಸಂಬಂಧಿತ ಸುದ್ದಿ