ಚಿತ್ರದುರ್ಗ: ಚಿತ್ರದುರ್ಗ ನಗರದ ಡಿಸಿ ಸರ್ಕಲ್ ಬಳಿ ಇಂದು ಕಾರ್ಯಕರ್ತರು ಬಾಂಗ್ಲಾದೇಶದ ವಿರುದ್ಧ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಬಾಂಗ್ಲಾದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳು ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ದಾಳಿ, ಹತ್ಯೆ, ಲೂಟಿ, ಆಸ್ತಿ ಹಾನಿ ಹಾಗೂ ಮಹಿಳೆಯರ ಮೇಲಿನ ಅಮಾನವೀಯ ದೌರ್ಜನ್ಯಗಳನ್ನು ನಡೆಸುತ್ತಿರುವುದು ಅತ್ಯಂತ ಚಿಂತಾಜನಕ ಸಂಗತಿ. ಇಂತಹ ಹೇಯಕೃತ್ಯವನ್ನು ಹಿಂದೂ ಹಿತರಕ್ಷಣಾ ಸಮಿತಿ ಖಂಡಿಸುತ್ತದೆ ಎಂದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಉದ್ದಕ್ಕೂ ಹಿಂದೂಗಳನ್ನು ರಕ್ಷಿಸಿ ಹಿಂದೂಗಳನ್ನು ರಕ್ಷಿಸಿ ಎನ್ನುವ ಘೋಷವಾಕ್ಯವನ್ನು ಕೂಗುವುದರ ಮೂಲಕ ತಮ್ಮ ಆಕ್ರೋಶವನ್ನ ಹೊರ ಹಾಕಿದ್ದಾರೆ.
Kshetra Samachara
04/12/2024 01:46 pm