ಮೈಸೂರು : ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ಭಾಗದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ಸಂಘರ್ಷ ಮುಂದುವರಿದೆ.
ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು. ಹೆಚ್.ಡಿ ಕೋಟೆ ತಾಲ್ಲೂಕಿನ
ಶಾಂತಿಪುರ, ಬೋಚಿಕಟ್ಟೆ ಮತ್ತು ಚಾಕಹಳ್ಳಿ ಗ್ರಾಮಗಳ ಸುತ್ತಮುತ್ತ ಹುಲಿ ಭೀತಿ ಎದುರಾಗಿದೆ. ಎರಡು ಮರಿಗಳೊಂದಿಗೆ ತಾಯಿ ಹುಲಿ ಸಂಚಾರ ಮಾಡಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ಬೀಡುಬಿಟ್ಟಿದ್ದಾರೆ.
ಮಳೆ ನಡುವೆಯೂ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರ್ ಎಫ್ ಓ ಪೂಜಾ, ಡಿಆರ್ ಎಫ್ಓ ಸ್ನೇಹ, ಪರಮೇಶ್ ಸೇರಿದಂತೆ 25 ಕ್ಕೂ ಹೆಚ್ಚು ನುರಿತ ತಜ್ಞರಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹುಲಿ ಹೆಜ್ಜೆ ಗುರುತು, ಜಾಡು ಹಿಡಿದು ಸೆರೆ ಹಿಡಿಯಲು ಯತ್ನಿಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿಗೆ ಹುಲಿ ಚೆಳ್ಳೆಹಣ್ಣು ತಿನ್ನಿಸುತ್ತಿದೆ. ಹುಲಿಯನ್ನು ಸೆರೆಹಿಡಿಯಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
PublicNext
04/12/2024 02:11 pm