ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ

ಸಾಗರ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆ ದೌರ್ಜನ್ಯ ಖಂಡಿಸಿ ಮತ್ತು ಇಸ್ಕಾನ್ ಸಂತ ಚಿನ್ಮಯ ಕೃಷ್ಣದಾಸ ಪ್ರಭುರನ್ನು ಬಂಧನವನ್ನು ವಿರೋಧಿಸಿ ಹಾಗೂ ಹಿಂದೂಗಳ ರಕ್ಷಣೆಗೆ ಆಗ್ರಹಿಸಿ ಸಾಗರದ ಹಿಂದೂ ಹಿತರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆ ಸಾಗರ, ಶಿಕಾರಿಪುರ, ಸೊರಬ ಭಾಗದಿಂದ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿ ಸಾಗರದ ಚಾಮರಾಜಪೇಟೆ ರಸ್ತೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಸಿದ ನಂತರ ಉಪ ವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಹಿಂದೂಧರ್ಮದ ಮೇಲೆ ಪದೇಪದೇ ದೌರ್ಜನ್ಯ ನಡೆಯುತ್ತಿದೆ. ಹಿಂದೂಧರ್ಮವನ್ನು ನಾಶಮಾಡುವ ಪ್ರಯತ್ನ ನಡೆಯುತ್ತಿದೆ. ಆದರೆ ನಮ್ಮ ಹಿರಿಯರ ತ್ಯಾಗಬಲಿದಾನ, ಸಮರ್ಪಣಾ ಭಾವ ಹಾಗೂ ಆಧ್ಯಾತ್ಮಿಕ ಚಿಂತನೆಯಿಂದ ನಮ್ಮ ಧರ್ಮವನ್ನು ಹಿಮ್ಮೆಟ್ಟಿಸಲು ಯಾರ ಕೈನಿಂದಲೂ ಸಾಧ್ಯವಾಗುತ್ತಿಲ್ಲ. ಇದು ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ. ಬಾಂಗ್ಲಾದಲ್ಲಿ ಹಿಂದೂ ಧರ್ಮದ ಮೇಲೆ ದಬ್ಬಾಳಿಕೆ ನಡೆಸುವ ಮೂಲಕ ನಮ್ಮನ್ನು ಬೆದರಿಸುವ ತಂತ್ರ ನಡೆಸಲಾಗುತ್ತಿದೆ. ತಕ್ಷಣ ಹಿಂದೂ ಧರ್ಮಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲಿಸಬೇಕು. ಭಾರತ ಸರ್ಕಾರ ತಕ್ಷಣ ಮಧ್ಯಪ್ರವೇಶ ಮಾಡಿ ಸೂಕ್ತ ಎಚ್ಚರಿಕೆ ಬಾಂಗ್ಲಾ ಸರ್ಕಾರಕ್ಕೆ ನೀಡಬೇಕು ಎಂದು ಹಿಂದೂ ಮುಖಂಡರು ಹೇಳಿದರು.

Edited By : PublicNext Desk
Kshetra Samachara

Kshetra Samachara

04/12/2024 03:43 pm

Cinque Terre

980

Cinque Terre

0

ಸಂಬಂಧಿತ ಸುದ್ದಿ