ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಹಿಂದು ಹಿತರಕ್ಷಣಾ ಸಮಿತಿಯಿಂದ ಡಿ.5 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ

ಕೊಡಗು : ನೆರೆಯ ಬಾಂಗ್ಲಾ ದೇಶದಲ್ಲಿರುವ ಮತಾಂಧ ಸರ್ಕಾರ, ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕೊಡಗು ಜಿಲ್ಲಾ ಹಿಂದು ಹಿತರಕ್ಷಣಾ ಸಮಿತಿಯಿಂದ ಡಿ.5 ರಂದು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಮತ್ತು ಜಾಗೃತಿ ಸಮಾವೇಶ ನಡೆಯಲಿದೆ ಎಂದು ಸಮಿತಿಯ ಪ್ರಮುಖ ಕುಕ್ಕೇರ ಅಜಿತ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಬೆಳಗ್ಗೆ 10.30 ಗಂಟೆಗೆ ನಗರದ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಗರದ ಮುಖ್ಯ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ನಂತರ ಗಾಂಧಿ ಮೈದಾನದಲ್ಲಿ ಜಾಗೃತಿ ಸಭೆಯನ್ನು ಆಯೋಜಿಸಲಾಗಿದೆ ಎಂದರು.

Edited By : Manjunath H D
PublicNext

PublicNext

04/12/2024 04:10 pm

Cinque Terre

7.85 K

Cinque Terre

0

ಸಂಬಂಧಿತ ಸುದ್ದಿ