ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ಸಿಎಂ ದೇವಸ್ಥಾನಗಳ ಅಭಿವೃದ್ದಿಗೆ 4 ಕೋಟಿ ರೂ ಬಿಡುಗಡೆ ಮಾಡಿದ್ದಾರೆ: ಶಾಸಕ ಬೇಳೂರು

ಸಾಗರ: ತಾಲ್ಲೂಕಿನ ಎಲ್ಲಾ ದೇವಸ್ಥಾನಗಳ ಅಭಿವೃದ್ದಿಗೆ 4 ಕೋಟಿ ರೂ. ಬಿಡುಗಡೆಯಾಗಿದ್ದು, ಮುಂದಿನ ವರ್ಷ ಮತ್ತೆ 5 ಕೋಟಿ ರೂ. ಅನುದಾನ ನೀಡಲು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗುತ್ತದೆ ಎಂದು ಶಾಸಕ ಮತ್ತು ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಇಲ್ಲಿನ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ದೇವಾಲಯಗಳ ಅಭಿವೃದ್ದಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಯಾಗಿರುವ 4 ಕೋಟಿ ರೂ. ವಿಶೇಷ ಅನುದಾನ ಬಳಕೆ ಕುರಿತು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ನಾನು 2008ರಲ್ಲಿ ಶಾಸಕನಾಗಿದ್ದಾಗ ತಾಲ್ಲೂಕಿನ ದೇವಸ್ಥಾನಗಳ ಅಭಿವೃದ್ದಿಗೆ ಆರಾಧನಾ ಸಮಿತಿಯಿಂದ ಹೆಚ್ಚಿನ ಅನುದಾನ ತರಲಾಗಿತ್ತು. ನಂತರದ ದಿನಗಳಲ್ಲಿ ತಾಲ್ಲೂಕಿನ ದೇವಸ್ಥಾನಗಳು ಅಭಿವೃದ್ದಿಗೆ ನಿರೀಕ್ಷಿತ ಪ್ರಮಾಣದಲ್ಲಿ ಹಣ ಬಿಡುಗಡೆಯಾಗಿರಲಿಲ್ಲ. ದೊಡ್ಡ ದೇವಸ್ಥಾನಗಳ ಜೊತೆಗೆ ಸಣ್ಣ ದೇವಸ್ಥಾನಗಳ ಅಭಿವೃದ್ದಿ ಸಹ ಆಗಬೇಕು ಎನ್ನುವುದು ನನ್ನ ಉದ್ದೇಶವಾಗಿದೆ. ಗ್ರಾಮೀಣ ಭಾಗದಲ್ಲಿ ಜನರು ಸಣ್ಣಪುಟ್ಟ ಗುಡಿಗಳನ್ನು ನಿರ್ಮಿಸಲು ಕಷ್ಟಪಡುತ್ತಿರುತ್ತಾರೆ. ಅವರಿಗೆ ತಕ್ಕಮಟ್ಟಿಗೆ ಆರ್ಥಿಕ ಸಹಕಾರ ನೀಡಲು ಸರ್ಕಾರಕ್ಕೆ ಮನವಿ ಮಾಡಿಕೊಂಡಾಗ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿಯವರು 4 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದರು. ಕ್ಷೇತ್ರವ್ಯಾಪ್ತಿಯಲ್ಲಿ 2 ರಿಂದ 20 ಲಕ್ಷ ರೂಪಾಯಿವರೆಗೆ ದೇವಸ್ಥಾನಗಳ ಪುನರುಜ್ಜೀವನಕ್ಕಾಗಿ ಹಣ ನೀಡಲಾಗಿದೆ.

ಇದರ ಸದ್ಭಳಕೆಯಾಬೇಕು. ಸರ್ಕಾರ ಕೇಳುವ ಸೂಕ್ತ ದಾಖಲೆಗಳನ್ನು ದೇವಸ್ಥಾನ ಸಮಿತಿಯವರು ನೀಡಬೇಕು. ಅನುದಾನಕ್ಕೆ ಅರ್ಜಿ ಹಾಕದೆ ಇದ್ದವರಿಗೂ ಸಹ ಅನುದಾನ ನೀಡಲಾಗಿದೆ. ನಿರ್ಮಿತಿ ಕೇಂದ್ರದ ನಿರ್ವಹಣೆಯಲ್ಲಿ ದೇವಸ್ಥಾನ ಅಭಿವೃದ್ದಿ ಕೆಲಸ ನಡೆಯುತ್ತದೆ. ಸ್ಥಳೀಯರು ಇದನ್ನು ಗಮನಿಸಿ ತಮಗೆ ಬೇಕಾದ ರೀತಿಯಲ್ಲಿ ಪುನರ್ ನಿರ್ಮಿಸಿಕೊಳ್ಳಬೇಕು ಎಂದು ಹೇಳಿದರು.

ಉಪವಿಭಾಗಾಧಿಕಾರಿ ಯತೀಶ್ ಆರ್., ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ಮುಜರಾಯಿ ಇಲಾಖೆಯ ವಿವಿಧ ಅಧಿಕಾರಿಗಳು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

04/12/2024 04:11 pm

Cinque Terre

1.08 K

Cinque Terre

0

ಸಂಬಂಧಿತ ಸುದ್ದಿ