ಮಣಿಪಾಲ: ಕಾಡಂಚಿನ ಪ್ರದೇಶದಲ್ಲಿ ಹಾಗೂ ಕೆಲವು ತೋಟಗಳಲ್ಲಿ ಗಾಂಜಾ ಬೆಳೆಯುವ ಸಾಧ್ಯತೆ ಇದ್ದು, ಇವುಗಳ ಬಗ್ಗೆ ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಯ ಸಿಬಂದಿ ನಿರಂತರ ವೀಕ್ಷಣೆ ನಡೆಸುತ್ತಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು.
ಡಿಸಿ ಕಚೇರಿ ಸಭಾಂಗಣ ದಲ್ಲಿ ನಡೆದ ಎನ್‌ಸಿಒಆರ್‌ಡಿ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ವಸ್ತುಗಳ ಬಗ್ಗೆ ಶಾಲಾ- ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.
ಕರಾವಳಿ ಪೊಲೀಸರು ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣಿಕೆ ಬಗ್ಗೆ ನಿಗಾ ವಹಿಸಬೇಕು. ಜಿಲ್ಲೆಯಲ್ಲಿ 97ಕ್ಕೂ ಹೆಚ್ಚು ಮಾದಕ ಸೇವನೆಗಳ ಪ್ರಕರಣ ದಾಖಲಾಗಿದ್ದು, ಶೇ. 90ರಷ್ಟು ಪ್ರಕರಣಗಳು ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಆಗಿದೆ. ಈ ಬಗ್ಗೆ ಕೇರ್ ಟೆಕ್ ಗಳನ್ನು ಹೆಚ್ಚು ನಿಯೋಜಿಸಬೇಕು ಹಾಗೂ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.ಪೊಲೀಸ್ ಅಧೀಕ್ಷಕ ಡಾ| ಕೆ.ಅರುಣ್ ಮಾತನಾಡಿ, ಮೌತ್ ಫ್ರೆಶ್ನರ್ ಎಂದು ತಂಬಾಕು ಉತ್ಪನ್ನಗಳನ್ನು ಜಾಹೀರಾತುಪಡಿಸಿ, ಮಾರಾಟ ಮಾಡುತ್ತಿರುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಇಂತಹ ಜಾಹೀರಾತು ಫಲಕಗಳನ್ನು ತೆರವುಗೊಳಿಸಲು ಮುಂದಾಗಬೇಕು ಎಂದರು.
Kshetra Samachara
04/12/2024 04:12 pm