ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕೋಣನೂರು ಗ್ರಾಮದಲ್ಲಿ ಪ್ರೀತಿಸಿ ಮದುವೆಯಾಗಿದ್ದ ಮಂಜುನಾಥನನ್ನು ಹುಡುಗಿಯ ಪೋಷಕರು ಘೋರವಾಗಿ ಹತ್ಯೆ ಮಾಡಿ ಕೊಲೆ ಮಾಡಿದ್ದರು.
ಈ ಸಂಬಂಧ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ಈಗಾಗಲೇ ಎಂಟು ಮಂದಿಗಳನ್ನು ಅರೆಸ್ಟ್ ಕೂಡ ಮಾಡಿದೆ. ಮುಖ್ಯ ಆರೋಪಿಯಾದ ಕಲ್ಲೇಶ್ ಅವರನ್ನು ಕೂಡಲೇ ಬಂಧಿಸಬೇಕು. ಅವರ ಮಗಳ ಮದುವೆ ಇದೇ ಡಿಸೆಂಬರ್ 10ನೇ ತಾರೀಕು ಇರುವುದರಿಂದ ಅವರು ಗ್ರಾಮಕ್ಕೆ ಬರುವ ನಿರೀಕ್ಷೆ ಇದೆ. ಹಾಗಾಗಿ ಅವರನ್ನು ಕೂಡಲೇ ಬಂಧಿಸಿ ನ್ಯಾಯ ದೊರಕಿಸಿ ಕೊಡಬೇಕೆಂದು ಮೃತ ಮಂಜುನಾಥ್ ಕುಟುಂಬಸ್ಥರು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
PublicNext
04/12/2024 04:15 pm