ಕೋಲಾರ : ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ದಂಪತಿ ಗಂಭೀರ ಗಾಯಗೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ತಾಲೂಕಿನ ಕೋಡಿಕಣ್ಣೂರು ಗ್ರಾಮದಲ್ಲಿ ಮನೆಯ ಸಿಲಿಂಡರ್ ಸ್ಫೋಟಗೊಂಡು ಮುನಿರಾಜು, ರತ್ನಮ್ಮ ದಂಪತಿಗಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಮನೆಯ ವಸ್ತುಗಳು ಛಿದ್ರ ಛಿದ್ರವಾಗಿದೆ. ಕೋಲಾರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
04/12/2024 04:37 pm