ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಾಚ್ಯ ಶಬ್ದಗಳ ನಿಂದನೆ ಮಾಡಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ ತುಮಕೂರು ಮೂಲದ ಮೋಹಿತ್ ನರಸಿಂಹಮೂರ್ತಿ(38) ಎಂಬ ವ್ಯಕ್ತಿಯ ವಿರುದ್ಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿದ ಬೆಳಗಾವಿ ಮಾರ್ಕೆಟ್ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.
ಸತೀಶ್ ಜಾರಕಿಹೊಳಿಗೆ ನಿಂದನೆ ಹಿನ್ನೆಲೆ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಸಚಿವರ ಆಪ್ತ ವಿಜಯ ತಳವಾರ್ ಎಂಬುವರಿಂದ ಕೇಸ್ ದಾಖಲಿಸಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು, ತುಮಕೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
PublicNext
04/12/2024 04:39 pm