ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆ

ಕೋಲಾರ: ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿ ಕುರಿತು ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯ 87 ಕೆರೆಗಳಲ್ಲಿ 50 ಕೆರೆಗಳನ್ನು ಸರ್ವೇ ಮಾಡಲಾಗಿದೆ ಉಳಿದ ಕೆರೆಗಳನ್ನು ಶೀಘ್ರವಾಗಿ ಸರ್ವೇ ಮಾಡಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು‌ ತಿಳಿಸಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ.ಸಿಇಒ ಅಕ್ರಂ ಪಾಷ ರವರ ಅಧ್ಯಕ್ಷತೆಯಲ್ಲಿ ಇಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ವೈಯಕ್ತಿಕ ಶೌಚಾಲಯ ನಿರ್ಮಾಣದ ವಿಷಯವಾಗಿ ಅವಶ್ಯಕತೆಯನುಸಾರ ವೈಯಕ್ತಿಕ ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣ ಮಾಡಲು ಕಾರ್ಯಾದೇಶ ವಿತರಿಸಿ ತುರ್ತಾಗಿ ಪ್ರಗತಿ ಸಾಧಿಸುವಂತೆ ಸೂಚಿಸಿದರು. ಈಗಾಗಲೇ ತಿಳಿದಿರುವಂತೆ ಗ್ರಾಮದಲ್ಲಿ ಮೂಲ ಸಮಸ್ಯೆಗಳಲ್ಲಿ ಒಂದಾದ ಕೊಳಚೆ ನೀರು ನಿರ್ವಹಣೆಯ ವಿಷಯವಾಗಿ ಹಲವಾರು ಸವಾಲುಗಳು ತಲೆದೂರುತ್ತಿದ್ದು ತುರ್ತಾಗಿ ಬದು ನೀರು ನಿರ್ವಹಣೆಯ ಕಾಮಗಾರಿಗಳನ್ನು ಪ್ರಾರಂಭಿಸಿ ಮುಕ್ತಾಯಗೊಳಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

04/12/2024 06:40 pm

Cinque Terre

200

Cinque Terre

0

ಸಂಬಂಧಿತ ಸುದ್ದಿ