ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಿಯನ್ನು ಬೆಳಗಾವಿ ಪೊಲೀಸರು ತುಮಕೂರಿನಲ್ಲಿ ಬಂಧನ ಮಾಡಿ, ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಆದರೆ, ಸತೀಶ್ ಜಾರಕಿಹೊಳಿ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.
ಸಚಿವ ಸತೀಶ ಜಾರಕಿಹೊಳಿಗೆ ಅವಹೇಳನಕಾರಿ ಹೇಳಿಕೆ ಪ್ರಕರಣದ ವಿಚಾರವಾಗಿ ಮಾರ್ಕೆಟ್ ಪೊಲೀಸರಿಂದ ಆರೋಪಿಯನ್ನು ಬಂಧಿಸಿ, ಬೆಳಗಾವಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಮಾರ್ಕೆಟ್ ಪೊಲೀಸ್ ಠಾಣೆಗೆ ಬಂದ ಸತೀಶ್ ಜಾರಕಿಹೊಳಿ ಅಭಿಮಾನಿಗಳು, ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪಿಯನ್ನು ತಮ್ಮ ಕೈಗೆ ನೀಡುವಂತೆ ಪೊಲೀಸರ ಜತೆಗೆ ವಾಗ್ವಾದ ನಡೆಸಿದ್ದಾರೆ.
ಆರೋಪಿಯನ್ನು ನಮ್ಮ ಕೈಗೆ ಕೊಡುವಂತೆ ಪಟ್ಟು ಹಿಡಿದ ಸತೀಶ್ ಜಾರಕಿಹೊಳಿ ಅಭಿಮಾನಿಗಳು, ಪೊಲೀಸ್ ಠಾಣೆ ಮುಂಭಾಗದಲ್ಲಿ ಕುಳಿತು ಪ್ರತಿಭಟಿಸಿದ್ದಾರೆ. "ದೇವರ ಸಮಾನರಾದ ನಮ್ಮ ನಾಯಕರ ಬಗ್ಗೆ ಈ ಮೋಹಿತ್ ನರಸಿಂಹ ಮೂರ್ತಿ ಹೇಗೆ ನಿಂದಿಸಿದ!? ಈ ಕ್ರಿಮಿಯನ್ನು ನಮ್ಮ ಕೈಗೆ ಒಪ್ಪಿಸಬೇಕು" ಎಂದು ಆಗ್ರಹಿಸಿದರು
PublicNext
04/12/2024 07:22 pm