ಪಬ್ಲಿಕ್ ನೆಕ್ಸ್ಟ್ ವರದಿ ಫಲಶ್ರುತಿ
ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕ್ಯಾದಿಗೆರೆ ಗ್ರಾಮಕ್ಕೆ ಕೆಎಸ್ಆರ್ಟಿಸಿ ಬಸ್ ಇಲ್ಲದ ಕಾರಣದಿಂದಾಗಿ ವಿದ್ಯಾರ್ಥಿಗಳು ಶಾಲೆಗೆ ದಿನನಿತ್ಯ ನಡೆದುಕೊಂಡೇ ಹೋಗಿ ಬರುವ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಈ ಬಗ್ಗೆ ವಿಸ್ತೃತ ವರದಿಯನ್ನು ನಿನ್ನೆ ಪಬ್ಲಿಕ್ ನೆಕ್ಸ್ಟ್ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಕೆಎಸ್ಆರ್ಟಿಸಿ ಅಧಿಕಾರಿಗಳು ಇಂದು ಕ್ಯಾದಿಗೆರೆ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಿಕೊಟ್ಟಿದ್ದಾರೆ.
ಗ್ರಾಮಕ್ಕೆ ಕೆಎಸ್ಆರ್ಟಿಸಿ ಬಸ್ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಬಸ್ಸಿಗೆ ಹೂವಿನ ಹಾರವನ್ನು ಹಾಕಿ ಬಸ್ಸಿನಲ್ಲಿ ಶಾಲೆಯವರೆಗೆ ಹರ್ಷಚಿತ್ತರಾಗಿ ಪ್ರಯಾಣ ಬೆಳೆಸಿದರು. ಒಟ್ಟಿನಲ್ಲಿ ಗ್ರಾಮಕ್ಕೆ ಕೆಎಸ್ಆರ್ಟಿಸಿ ಬಸ್ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸಿದ್ದಾರೆ.
PublicNext
04/12/2024 07:23 pm