ಮುಲ್ಕಿ: ಕಿನ್ನಿಗೋಳಿ ಸಮೀಪದ ಎಸ್ಕೋಡಿ ಎಂಬಲ್ಲಿ ವೃದ್ಧರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಆತ್ಮಹತ್ಯೆ ಮಾಡಿಕೊಂಡವರನ್ನು ಸ್ಥಳೀಯ ನಿವಾಸಿ ಬಾಬು ಶೆಟ್ಟಿಗಾರ (80) ಎಂದು ಗುರುತಿಸಲಾಗಿದೆ. ಮೃತ ಬಾಬು ಶೆಟ್ಟಿಗಾರ ಅನಾರೋಗ್ಯದಿಂದ ಬಳಲುತ್ತಿದ್ದು ಬುಧವಾರ ಬೆಳಗ್ಗೆ ಸುಮಾರು 11 ಗಂಟೆಗೆ ಮನೆಯ ಹೊರಗಿನ ಭಾಗದ ಟೆರೇಸ್ ಗೆ ಹೋಗುವ ಮೆಟ್ಟಿಲುಗಳಿಗೆ ಹಾಕಿದ ರಕ್ಷಣೆ ಕಬ್ಬಿಣದ ಸರಳುಗೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪುತ್ರ ಸದಾಶಿವ ಶೆಟ್ಟಿಗಾರ್ ನೀಡಿದ ದೂರಿನಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
04/12/2024 08:07 pm