ಮುಲ್ಕಿ: ಕಿನ್ನಿಗೋಳಿ ಸಮೀಪದ ಎಸ್ಕೋಡಿಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಮೃತರನ್ನು ಸಿಂತಿಯಾ ರೀಟ (47) ಎಂದು ಗುರುತಿಸಲಾಗಿದೆ
ಮೃತರು ಅನಾರೋಗ್ಯದಿಂದ ಬಳಲುತ್ತಿದ್ದು ಸೋಮವಾರ ಮಂಗಳೂರಿನ ಖಾತೆಗೆ ಆಸ್ಪತ್ರೆಯಿಂದ ವೈದ್ಯಕೀಯ ತಪಾಸಣೆ ಮಾಡಿಕೊಂಡು ಹಿಂತಿರುಗಿದ್ದು ತಡರಾತ್ರಿ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ
Kshetra Samachara
04/12/2024 08:09 pm