ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಕನ್ನಡ ಸಾಹಿತ್ಯ ಭವನ ನಿರ್ಮಾಣ ಅಗತ್ಯ ಸಹಕಾರಕ್ಕೆ ಮನವಿ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ನಿವೇಶನದಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಂಬಂಧ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಮತ್ತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂಥರ್ ಗೌಡ ಅವರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರ ನೇತೃತ್ವದಲ್ಲಿ ಭೇಟಿಯಾಗಿ ಭವನ ನಿರ್ಮಾಣ ಸಮಿತಿಯ ಮಹಾಪೋಷಕರಾಗಿ ಕಾರ್ಯನಿರ್ವಹಿಸುವಂತೆ ಮತ್ತು ಭವನ ನಿರ್ಮಾಣದ ಕಾರ್ಯದಲ್ಲಿ ಸಹಕರಿಸುವಂತೆ ಕೋರಿದರು.

ಈ ಕುರಿತು ಪ್ರತಿಕ್ರಿಯಿಸಿದ ಶಾಸಕರುಗಳು ಸಾಹಿತ್ಯ ಪರಿಷತ್ತಿನ ಭವನಕ್ಕೆ ಸಂಪೂರ್ಣ ಸಹಕಾರ ನೀಡುವುದರೊಂದಿಗೆ ಸರಕಾರದ ಮಟ್ಟದಲ್ಲಿ ಮುಖ್ಯಮಂತ್ರಿಗಳಿಂದ ಅನುದಾನ ಕೊಡಿಸುವುದಲ್ಲದೆ ಜಿಲ್ಲಾ ಮಟ್ಟದಲ್ಲಿಯೂ ಸಂಪೂರ್ಣ ಸಹಕರಿಸುವುದಾಗಿ ತಿಳಿಸಿದರು.

Edited By : Nagaraj Tulugeri
Kshetra Samachara

Kshetra Samachara

04/12/2024 09:19 pm

Cinque Terre

120

Cinque Terre

0

ಸಂಬಂಧಿತ ಸುದ್ದಿ