ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್: ದುಷ್ಟ, ಭ್ರಷ್ಟಾಚಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿಲ್ಲದು - ಬಿ.ವೈ ವಿಜಯೇಂದ್ರ

ಬೀದರ್: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರೈತ ವಿರೋಧಿ ಸರ್ಕಾರವಾಗಿದೆ. ವಕ್ಫ್ ಹೆಸರಿನಲ್ಲಿ ರೈತರ ಜಮೀನು ಕಬಳಿಸಿ ಅವರಿಗೆ ಬೀದಿಗೆ ತರಲು ಹೊರಟಿರುವ ದುಷ್ಟ, ಭ್ರಷ್ಟಾಚಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿಲ್ಲದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

ನಗರದ ಗಾಂಧಿ ಗಂಜನಲ್ಲಿ ಬುಧವಾರ ವಕ್ಫ್ ಕಾಯ್ದೆ ವಿರುದ್ಧ ನಡೆದ ನಮ್ಮ ಭೂಮಿ ನಮ್ಮ ಹಕ್ಕು ಹೋರಾಟ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದಾದ ಮೇಲೊಂದು ಹಗರಣಗಳು ಬೆಳಕಿಗೆ ಬರುತ್ತಿವೆ. ಬಿಜೆಪಿ ಭ್ರಷ್ಟ ಆಡಳಿತದ ವಿರುದ್ಧ ನಿರಂತರ ಹೋರಾಟ ಮಾಡಿಕೊಂಡು ಬರುತ್ತಿದೆ. ಎಸ್‌ಸಿ-ಎಸ್‌ಟಿ ಮೀಸಲು ಹಣ, ವಾಲ್ಮೀಕಿ ನಿಗಮ ಮತ್ತು ಮೈಸೂರು ಮುಡಾ ಹಗರಣ ಹೀಗೆ ಅನೇಕ ಹಗರಣ ನಡೆಸಿದೆ. ಆರಂಭದಲ್ಲಿ ನಮ್ಮ ಆಡಳಿತದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಹೇಳುತ್ತಿದ್ದ ಸಿಎಂ, ಬಿಜೆಪಿ ಮತ್ತು ಸಾರ್ವಜನಿಕರ ಹೋರಾಟ ಭುಗಿಲೇಳುತ್ತಿದ್ದಂತೆ, ತಮ್ಮ ಸಿಎಂ ಸ್ಥಾನಕ್ಕೆ ಕುತ್ತು ಬರುವ ಆತಂಕಕ್ಕೆ ಎಲ್ಲವನ್ನು ಒಪ್ಪಿಕೊಂಡಿದ್ದಾರೆ. ನಾವು ಸರ್ಕಾರದ ತೇಜೋವಧೆ ಮಾಡುತ್ತಿಲ್ಲ, ಸರ್ಕಾರದಿಂದ ಜನರಿಗೆ ಆಗುತ್ತಿರುವ ಮೋಸಕ್ಕೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ರೈತರ ಜಮೀನು ಕಬಳಿಸಲು ಕಳೆದ ಕೆಲವು ದಿನಗಳ ಹಿಂದೆ ಸಿಎಂ ನಿರ್ದೇಶನದ ಮೇರೆಗೆ ಸಚಿವ ಜಮೀರ್ ಅಹ್ಮದ್ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ಡಿಸಿಗಳೊಂದಿಗೆ ಸಭೆ ನಡೆಸಿ ಪಾಹಣಿಗಳಲ್ಲಿ ವಕ್ಫ್ ಹೆಸರು ಸೇರಿಸುವಂತಹ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರದ ಈ ಬಯಕೆ ಈಡೇರುವುದಿಲ್ಲ, ರೈತರನ್ನು ಬೀದಿಪಾಲು ಮಾಡಲು ನಾವು ಬಿಡುವುದಿಲ್ಲ ಎಂದರು.

Edited By : Nagesh Gaonkar
PublicNext

PublicNext

04/12/2024 09:33 pm

Cinque Terre

6.76 K

Cinque Terre

0

ಸಂಬಂಧಿತ ಸುದ್ದಿ