ಬೆಂಗಳೂರು: ಮಧ್ಯಂತರ ಜಾಮೀನಿನ ಮೇಲೆ ಆಸ್ಪತ್ರೆಯಲ್ಲಿರುವ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗೋ ಸಾಧ್ಯತೆಯಿದೆ.
ದರ್ಶನ್ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ರಾಜ್ಯ ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ರಾಜ್ಯ ಪೊಲೀಸ್ ಸುಪ್ರೀಂ ಕೋರ್ಟ್‌ಗೆ ಎಸ್ಎಲ್ಪಿ ಸಲ್ಲಿಕೆ ಮಾಡಿದೆ. ಇದೇ ಶುಕ್ರವಾರ ಅಥವಾ ಮುಂದಿನ ಸೋಮವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಹೈಕೋರ್ಟ್‌ನ ಏಕಸದಸ್ಯ ಪೀಠ ನೀಡಿದ್ದ ಮಧ್ಯಂತರ ಜಾಮೀನು ಪ್ರಶ್ನಿಸಿ ಅರ್ಜಿ ಸಲ್ಲಿಸಲು ಕಾಮಾಕ್ಷಿಪಾಳ್ಯ ಪೊಲೀಸ್ರು ಸರ್ಕಾರಕ್ಕೆ ಮನವಿ ಮಾಡಿದರು. ರಾಜ್ಯ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೆ ಇಂದು ಸುಪ್ರೀಂ ಕೋರ್ಟ್‌ಗೆ ಸರ್ಕಾರದ ಪರ ವಕೀಲರು ಅರ್ಜಿ ಸಲ್ಲಿಕೆ ಮಾಡಿದ್ದಾರೆ.
PublicNext
04/12/2024 09:46 pm