ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕಾಂಗ್ರೆಸ್ ಸರಕಾರವನ್ನು ಅಲಿಬಾಬಾ & 40 ಕಳ್ಳರಿಗೆ ಹೋಲಿಸಿದ ಎಚ್‌ ಡಿಕೆ

ಬೆಂಗಳೂರು: ಈ ಕಾಂಗ್ರೆಸ್‌ ರಾಜ್ಯ ಸರಕಾರ ಅಲಿಬಾಬಾ ಮತ್ತು 40 ಕಳ್ಳರ ಗುಂಪಿನಂತೆಯೇ ಇದೆ ಎಂದು ಕೇಂದ್ರ ಸಚಿವ ಎಚ್‌. ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದಾಗಿನಿಂದಲೂ  17ರಿಂದ 18 ಎಸ್ ಐಟಿಗಳನ್ನು ರಚನೆ ಮಾಡಿಕೊಂಡು ರಾಜಕೀಯ ಹಗೆತನ ತೋರುತ್ತಿರುವ ಈ ವ್ಯಕ್ತಿಗಳನ್ನು ಏನೆಂದು ಕರೆಯಬೇಕು!? ಎಂದು ಪ್ರಶ್ನಿಸಿದರು.

ಇ.ಡಿ.ಯನ್ನು ಸಚಿವ ಕೃಷ್ಣಭೈರೇಗೌಡರು ಸೀಳುನಾಯಿ ಎಂದು ನಿಂದಿಸಿರುವ ಕುರಿತು ಮಾತನಾಡಿದ ಎಚ್‌ ಡಿಕೆ,

ಅವರಿಗೆ ಹ್ಯಾಟ್ಸ್ ಆಫ್ ಮಾಡೋಣ ಎಂದು ಲೇವಡಿ ಮಾಡಿದರು. ಲೋಕಾಯುಕ್ತ ಅಧಿಕಾರಿಗಳು ಯಾರು? ಸರಕಾರದ ಅಧೀನದಲ್ಲಿ ಬರುವವರು ತಾನೇ? ಇವತ್ತು ಎಷ್ಟು ಜನ ಮಂತ್ರಿಗಳು ಸಮಜಾಯಿಷಿ ಕೊಡುತ್ತಿದ್ದಾರೆ. ಎಲ್ಲರೂ ರಿಲೇಯಲ್ಲಿ ನಿಂತವರಂತೆ ಇ.ಡಿ.ಯನ್ನು ಬೈಯ್ಯುತ್ತಿದ್ದಾರೆ. ತಪ್ಪು ಮಾಡಿದ್ದಾರೆ, ಹಾಗಾಗಿ ಇವರೆಲ್ಲ ಹತಾಶೆಯಿಂದ ನಿಂದನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಸನದ ಪ್ರಕರಣಕ್ಕೆ ಸಂಬಂಧಿಸಿ ವಕೀಲ ದೇವರಾಜೇಗೌಡರು ಆಡಿಯೋ ರಿಲೀಸ್ ಮಾಡಿದ್ದರು. ಆಡಿಯೋದಲ್ಲಿ ಡಿ.ಕೆ.ಶಿವಕುಮಾರ್ ಏನೇನು ಹೇಳಿದರು ಎನ್ನುವುದನ್ನು ಇಡೀ ದೇಶವೇ ಕೇಳಿಸಿಕೊಂಡಿದೆ. ಹಾಸನದಲ್ಲಿ ಅದೇನೋ ಸಮಾವೇಶ ಮಾಡುತ್ತಿದ್ದಾರಂತೆ. ಸಾಂತ್ವನ ಹೇಳುವುದಕ್ಕೆ ಹೋಗುತ್ತಾರಂತೆ. ಯಾರಿಗೆ ಸಾಂತ್ವನ ಹೇಳ್ತೀಯಪ್ಪ? ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಆ ಹೆಣ್ಣು ಮಕ್ಕಳ ಫೋಟೋ ಹಾಕಿ ಬೀದಿ ಬೀದಿಗಳಲ್ಲಿ ಪ್ರಚಾರ ಮಾಡಿದರಲ್ಲವೇ? ಯಾರಾದರೂ ಒಬ್ಬರನ್ನಾದರೂ ಬಂಧಿಸಿದ್ದೀರಾ ಇವರು? ಆ ವೀಡಿಯೊ ಹರಿಯಬಿಟ್ಟವರನ್ನು ಅರೆಸ್ಟ್ ಮಾಡಿದ್ದೀರಾ? ಇದು ನಿಮ್ಮ ಎಸ್ ಐಟಿ ತನಿಖೆನಾ? ಇದೆಲ್ಲದ್ದಕ್ಕೂ ಕಾಲ ಒಂದು ದಿನ ಉತ್ತರ ಕೊಡುತ್ತದೆ. ಸತ್ಯಗಳು ಹೊರಗೆ ಬರುವುದು ನಿಶ್ಚಿತ. ಕೃಷ್ಣ ಭೈರೇಗೌಡರೇ, ನೀವು ಹೇಗೆ ನಡೆದುಕೊಳ್ತೀರಾ. ನಿಮ್ ಸರಕಾರ ಹೇಗೆ ನಡೆದುಕೊಳ್ತಿದೆ? ಸಚಿವ ಪರಮೇಶ್ವರ್ ಹೇಳಿಕೆ ನೋಡಿದೆ‌. ಇವರನ್ನು ದೇವರೇ ಕಾಪಾಡಬೇಕು. ಹಾಗಲಕಾಯಿಗೆ ಬೇವಿನ ಕಾಯಿ  ಸಾಕ್ಷಿ ಎಂಬಂತೆ ಆಗಿದೆ ಇವರದ್ದು ಎಂದು ತರಾಟೆಗೆ ತೆಗೆದುಕೊಂಡರು.

Edited By : Nagesh Gaonkar
PublicNext

PublicNext

04/12/2024 10:24 pm

Cinque Terre

7.16 K

Cinque Terre

1

ಸಂಬಂಧಿತ ಸುದ್ದಿ