ಬೆಂಗಳೂರು: ರಾಷ್ಟ್ರೀಯ ಮಾಧ್ಯಮವೊಂದರ ಸಂದರ್ಶನದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರಸ್ತಾಪಿಸಿದ್ದರು. ಅದಕ್ಕೆ ಪ್ರತಿಯಾಗಿ ಇಂದು ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಯಾವುದೇ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದವಾಗಿಲ್ಲ ಎಂದಿದ್ದರು. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ನಾನು ಸಿಎಂ ಕುರ್ಚಿ ಹಾಗೂ ಪಕ್ಷಕ್ಕೆ ಸದಾ ನಿಷ್ಠನಾಗಿರುತ್ತೇನೆ. ಮುಖ್ಯಮಂತ್ರಿಗಳು ಹೇಳಿದ ಮೇಲೆ ಅದೇ ಅಂತಿಮ. ಅದರ ಬಗ್ಗೆ ಮರುಪ್ರಶ್ನೆಯೇ ಇಲ್ಲ ಅವರ ಹೇಳಿಕೆ ನಂತರ ಈ ವಿಚಾರವಾಗಿ ಯಾವುದೇ ವಾದ, ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದರು.
PublicNext
04/12/2024 10:30 pm