ಬೆಂಗಳೂರು: ಯುಜಿ ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ವಿಶೇಷ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ರಾತ್ರಿ ಪ್ರಕಟಿಸಿದೆ.
ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಡಿಸೆಂಬರ್ 6ರೊಳಗೆ ಚಲನ್ ಡೌನ್‌ಲೋಡ್ ಮಾಡಿಕೊಂಡು ನಿಗದಿತ ಶುಲ್ಕ ಪಾವತಿಸಬೇಕು. ಬಳಿಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಮೂಲ ದಾಖಲೆಗಳ ಸಮೇತ ಡಿಸೆಂಬರ್ 7ರೊಳಗೆ ಸಂಬಂಧಪಟ್ಟ ಕಾಲೇಜುಗಳಿಗೆ ಹೋಗಿ ವರದಿ ಮಾಡಿಕೊಳ್ಳಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
PublicNext
04/12/2024 10:58 pm