ಮಡಿಕೇರಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ ಮಡಿಕೇರಿಯಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಮಡಿಕೇರಿಯ ಚೌಡೇಶ್ವರಿ ದೇವಾಲಯದಲ್ಲಿ ಶಂಖ ಊದುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಚೌಡೇಶ್ವರಿ ದೇವಾಲಯದಿಂದ ಗಾಂಧಿ ಮೈದಾನದವರೆಗೆ ಸಾಗಿದ ಮೆರವಣಿಗೆ ಸಾಗುವ ದಾರಿಯೂದ್ದಕ್ಕೂ ಹಲವು ಅಂಗಡಿಗಳನ್ನು ಬಂದ್ ಮಾಡಿ ಹಿಂದೂಗಳು ಪ್ರತಿಭಟನೆಗೆ ಬೆಂಬಲ ನೀಡಿದರು.
ಪ್ರತಿಭಟನಾ ಮೆರವಣಿಗೆಯಲ್ಲಿ ಬಾಂಗ್ಲಾದೇಶದ ನೀತಿಯನ್ನು ತೀವ್ರವಾಗಿ ಖಂಡಿಸಿದ ಪ್ರತಿಭಟನಾಕಾರರು ಬಾಂಗ್ಲಾ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ನೂರಾರು ಹಿಂದು ಕಾರ್ಯಕರ್ತರು ಭಾಗಿಯಾಗುವುದರ ಜೊತೆಗೆ ಹಲವು ಹಿಂದು ಸಂಘಟನೆಗಳು ಪ್ರತಿಭಟನೆ ಸಾಥ್ ನೀಡಿತ್ತು.
PublicNext
05/12/2024 01:52 pm