ಯಾದಗಿರಿ: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಹೆಬ್ಬಾಳ (ಕೆ) ಗ್ರಾಮದ ಜಮೀನಿನಲ್ಲಿ ಅನುಮಾನಾಸ್ಪದವಾಗಿ ಮಹಿಳೆಯೊಬ್ಬರ ಮೃತ ದೇಹ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತ ದುರ್ದೈವಿಯನ್ನು ರೇಣುಕಾ ಪರಮಣ್ಣ (26) ಎಂದು ಗುರುತಿಸಲಾಗಿದೆ. ಮೃತ ಮಹಿಳೆ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಬಹಿರ್ದೆಸೆಗೆಂದು ತೆರಳಿ, ಮನೆಗೆ ವಾಪಸ್ ಬಾರದಿರುವಾಗ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಗುರುವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ. ಇನ್ನೂ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಿತ್ವಿಕ್ ಶಂಕರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹುಣಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
05/12/2024 02:30 pm