ಯಲ್ಲಾಪುರ: ಡಿಸೆಂಬರ್ 23ರಂದು ಯಲ್ಲಾಪುರ ತಾಲೂಕಿನ ಮಂಚಿಕೇರಿಯಲ್ಲಿ ನಡೆಯುವ ಆರನೇ ತಾಲೂಕಾ ಕನ್ನಡ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ರಂಗಕರ್ಮಿ ರಾಮಕೃಷ್ಣ ಭಟ್ ಧುಂಡಿ ಆಯ್ಕೆಯಾಗಿದ್ದಾರೆ.
ಯಲ್ಲಾಪುರ ಪಟ್ಟಣದ ಸಾಹಿತ್ಯ ಭವನದಲ್ಲಿ ಗುರುವಾರ ನಡೆದ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮೀತಿಯ ಸಭೆಯಲ್ಲಿ ಹಿರಿಯ ರಂಗಕರ್ಮಿ ರಾಮಕೃಷ್ಣ ಭಟ್ ದುಂಢಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಗೌರವ ಕಾರ್ಯದರ್ಶಿಗಳಾದ ಜಿ.ಎನ್.ಭಟ್ ತಟ್ಟಿಗದ್ದೆ, ಸಂಜೀವ ಕುಮಾರ ಹೊಸ್ಕೇರಿ, ಖಜಾಂಚಿ ಡಿ.ಎನ್.ಗಾಂವ್ಕಾರ್, ಸಮಿತಿಯ ಸದಸ್ಯರಾದ ವೇಣುಗೋಪಾಲ ಮದ್ಗುಣಿ, ಕೃಷ್ಣ ಭಟ್ಟ ನಾಯಕನಕೆರೆ, ಶ್ರೀನಿವಾಸ ಗಾಂವ್ಕಾರ್, ಸುಧೀರ ಕೋಡ್ಕಣಿ ಮುಂತಾದವರು ಪಾಲ್ಗೊಂಡಿದ್ದರು.
PublicNext
05/12/2024 04:50 pm