ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಜನನ ಮರಣಗಳ ನೋಂದಣಿ ಸುವ್ಯವಸ್ಥಿತವಾಗಿ ಮಾಡಿ -ಜಿಲ್ಲಾಧಿಕಾರಿ ಅಕ್ರಂ ಪಾಷ

ಕೋಲಾರ: ಕರ್ನಾಟಕ ಜನನ ಮತ್ತು ಮರಣ ನೋಂದಣಿ ನಿಯಮಗಳು– 2023 ಅಧಿಸೂಚನೆಯಂತೆ, ಜಿಲ್ಲೆಯಲ್ಲಿ ನೋಂದಣಿ ಪ್ರಕ್ರಿಯೆಯನ್ನು ಶೇಕಡ ನೂರರಷ್ಟು ಸಾಧಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಜನನ ಹಾಗೂ ಮರಣವನ್ನು ಕಡ್ಡಾಯವಾಗಿ 21 ದಿನದೊಳಗೆ ನೋಂದಾಯಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಜನನ– ಮರಣ ನೋಂದಣಿ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಜನನ ಹಾಗೂ ಮರಣವಾದ 21 ದಿನದೊಳಗೆ ಕಡ್ಡಾಯವಾಗಿ ನೋಂದಾಯಿಸಿ ಪ್ರಮಾಣಪತ್ರವನ್ನು ಉಚಿತವಾಗಿ ನೀಡಬೇಕು’ ಎಂದರು.

‘ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ ಹಾಗೂ ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಜನನ ಮರಣ ನೋಂದಣಾಧಿಕಾರಿಗಳು ಅಥವಾ ಉಪ ನೋಂದಣಾಧಿಕಾರಿಗಳು ಸಂಬಂಧಿಸಿದ ಪ್ರದೇಶಗಳ ವರದಿಗಳನ್ನು ಸಕಾಲದಲ್ಲಿ ಸಲ್ಲಿಸಬೇಕು. ಅವುಗಳನ್ನು ಸಂರಕ್ಷಿಸಿ ಹಾಗೂ ವ್ಯವಸ್ಥಿತವಾಗಿ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

Edited By : PublicNext Desk
Kshetra Samachara

Kshetra Samachara

05/12/2024 06:48 pm

Cinque Terre

340

Cinque Terre

0

ಸಂಬಂಧಿತ ಸುದ್ದಿ