ಮಾಲೂರು: ಪ್ರತಿಯೊಬ್ಬ ರೈತರು ಪ್ರತಿ ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸಿ ನಂತರ ಬೆಳೆ ಬೆಳೆದಾಗ ಮಾತ್ರ ಉತ್ತಮ ಇಳುವರಿ ಹಾಗೂ ಗುಣಮಟ್ಟದ ಬೆಳೆ ಬೆಳೆಯಲು ಸಾಧ್ಯ ಎಂದು ಕೃಷಿ ಸಹಾಯಕ ನಿರ್ದೇಶಕ ಮಂಜುನಾಥ್ ಹೇಳಿದರು.
ತಾಲ್ಲೂಕಿನ ದೊಡ್ಡ ಶಿವಾರ ಗ್ರಾಮ ಪಂಚಾಯಿತಿ ಆವರಣದಲ್ಲಿ ಕೃಷಿ ಇಲಾಖೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ವತಿಯಿಂದ ವಿಶ್ವ ಮಣ್ಣು ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ರೈತರು ಪ್ರತಿ ವರ್ಷಕ್ಕೊಮ್ಮೆ ತಮ್ಮ ಭೂಮಿಯಲ್ಲಿ ಮಣ್ಣಿನ ಪರೀಕ್ಷೆ ಮಾಡಿಸಿ ನಂತರ ಬೆಳೆ ಬೆಳೆಯಬೇಕು. ರೈತರಿಗೆ ನಮ್ಮ ಇಲಾಖೆಯಿಂದ ಉಚಿತವಾಗಿ ಮಣ್ಣು ಪರೀಕ್ಷೆಯನ್ನು ಮಾಡಿಸಿಕೊಡುತ್ತಿದ್ದೇವೆ. ಇದರ ಪ್ರಯೋಜನವನ್ನು ಪ್ರತಿಯೊಬ್ಬ ರೈತರು ಪಡೆದುಕೊಂಡು ಗುಣಮಟ್ಟದ ಉತ್ತಮ ಇಳುವರಿ ಬೆಳೆಗಳನ್ನು ಬೆಳದು ಆರ್ಥಿಕವಾಗಿಬೇಕು ಅಭಿವೃದ್ದಿ ಹೊಂದು ಬೇಕು ಎಂದು ತಿಳಿಸಿದರು.
Kshetra Samachara
05/12/2024 06:54 pm