ಕೊಡಗು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ ಮಡಿಕೇರಿಯಲ್ಲಿ ಹಿಂದೂ ಹಿತರಕ್ಷಣಾ ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆಯ ಸಮಾರೋಪ ಸಮಾರಂಭ ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆಯಿತು.
ಪ್ರತಿಭಟನಾ ಸಭೆ ಉದ್ದೇಶಿಸಿ ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಮಾತನಾಡಿ, ಬಾಂಗ್ಲಾದೇಶದಲ್ಲಿ ಮೀಸಲಾತಿ ವಿಚಾರದಲ್ಲಿ ವ್ಯವಸ್ಥಿತ ದಂಗೆ ನಡೆಸಿದ ದಂಗೆಕೋರರು ಅರಾಜಕತೆ ಸೃಷ್ಟಿಸಿ ಸರ್ಕಾರವನ್ನು ಅಸ್ಥಿರಗೊಳಿಸಿದ್ದಾರೆ. ಅಲ್ಲದೇ, ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಹಿಂದೂಗಳ ಮೇಲೆ ದಾಳಿ ನಡೆಸಿ ಕೊಲೆಗೈದಿದ್ದಾರೆ. ಹಿಂದೂ ದೇವಾಲಯಗಳನ್ನು ಧ್ವಂಸ ಮಾಡುತ್ತಿದ್ದಾರೆ. ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಇದನ್ನು ಖಂಡಿಸಿ ಅಲ್ಲಿನ ಹಿಂದೂಗಳು ಪ್ರತಿಭಟಿಸಿದರೆ ಅವರನ್ನೇ ಬಂಧಿಸಿ ಜೈಲಿಗೆ ಅಟ್ಟಲಾಗಿದೆ. ಅವರ ಭೇಟಿಗೆ ತೆರಳಿದವರನ್ನು ಬಂಧನಕ್ಕೆ ಒಳಪಡಿಸಲಾಗಿದೆ. ಇದರಿಂದ ಹಿಂದೂಗಳ ಸ್ಥಿತಿ ಶೋಚನೀಯವಾಗಿದೆ. ಇನ್ನಾದರೂ ಹಿಂದೂ ಸಮಾಜದ ರಕ್ಷಣೆಗೋಸ್ಕರ ನಾವೇ ಟೊಂಕಕಟ್ಟಿ ನಿಲ್ಲಬೇಕು ಎಂದು ಹೇಳಿದರು.
ಕೊಡಗಿನ ಎಸ್ಟೇಟ್‌ಗಳಲ್ಲಿ ಬಾಂಗ್ಲಾ, ಅಸ್ಸಾಂ ಕಾರ್ಮಿಕರು ನುಸುಳಿದ್ದಾರೆ. ಕಂದಳಿ ಜಾತಿಯ ಹಾವಿಗೆ ಹಾಲೆರದ ಹಾಗೆ ಇಂದು ಹಿಂದೂಗಳು ಅವರಿಗೆ ಸಹಾಯ ಮಾಡುತ್ತಿದ್ದಾರೆ. ಇವೆಲ್ಲವನ್ನು ಗಮನಿಸಿದರೇ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ದೌರ್ಜನ್ಯ ಕೊಡಗಿನಲ್ಲಿಯೂ ನಡೆಯುವ ಸಾಧ್ಯತೆಯಿದೆ ಎಂದ ಅವರು, ಕೊಡಗು ಯಾವ ಪರಿಸ್ಥಿತಿಯಲ್ಲಿದೇ ಎಂಬುದನ್ನು ನಾವು ಅರಿತು ಅವಲೋಕನ ಮಾಡಬೇಕಾಗಿದೆ ಎಂದರು
Kshetra Samachara
05/12/2024 07:48 pm