ಕುಂದಾಪುರ: ಕೊಂಕಣ ರೈಲ್ವೆ ವ್ಯಾಪ್ತಿಗೆ ಒಳಪಡುವ ಕುಂದಾಪುರ ತಾಲೂಕಿನ ಮೂಡ್ಲುಕಟ್ಟೆಯ ರೈಲು ನಿಲ್ದಾಣವನ್ನು ಅಭಿವೃದ್ಧಿಗೊಳಿಸುವತ್ತ ಹಂಗಳೂರು ಲಯನ್ಸ್ ಕ್ಲಬ್ ಹೆಜ್ಜೆ ಇಟ್ಟಿದೆ. ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿಯ ಬೇಡಿಕೆಯ ಮೇರೆಗೆ ಲಯನ್ಸ್ ಕ್ಲಬ್ ಹಂಗಳೂರು ಡಿಸೆಂಬರ್ 8ರ ಭಾನುವಾರ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ರೈಲು ನಿಲ್ದಾಣಕ್ಕೆ ಮೇಲ್ಚಾವಣಿ ಹಾಗೂ ನೆಲಹಾಸು ಕಾಮಗಾರಿಗೆ ಶಿಲಾನ್ಯಾಸ ನಡೆಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ಡಿಸೆಂಬರ್ 8ರ ಮಧ್ಯಾಹ್ನ 3 ಗಂಟೆಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ಗೆ ನೆಲಹಾಸುಗಳನ್ನು ಹಾಕಿ ನವೀಕರಿಸುವ ಹಾಗೂ ಮೇಲ್ಚಾವಣಿ ಕಾಮಗಾರಿಗಳಿಗೆ ಶಿಲನ್ಯಾಸಗೈಯಲಿದ್ದಾರೆ. ಕುಂದಾಪುರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ, ಲಯನ್ಸ್ ಜಿಲ್ಲೆ 317ಸಿ ಗವರ್ನರ್ ಮೊಹಮ್ಮದ್ ಹನೀಫ್, ಲಯನ್ಸ್ ಉಪಜಿಲ್ಲಾ ಗವರ್ನರ್ ಸಪ್ನಾ ಸುರೇಶ್, ಕೊಂಕಣ ರೈಲ್ವೆ ಪ್ರಾದೇಶಿಕ ಅಧಿಕಾರಿ ಆಶಾ ಶೆಟ್ಟಿ, ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಲಯನ್ಸ್ ಕ್ಲಬ್ ಹಂಗಳೂರು ಅಧ್ಯಕ್ಷ ರೋವನ್ ಡಿ ಕಾಸ್ಟಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
06/12/2024 07:22 am