ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಅಪರಿಚಿತ ವಾಹನ ಡಿಕ್ಕಿ ಚಿರತೆ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಆಹಾರ ಅರಸಿ ಹೋಗುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ರಕ್ತದ ಮಡುವಿನಲ್ಲಿ ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು- ಕಡೂರು ರಸ್ತೆಯ ಉದ್ದೇಬೋರನಹಳ್ಳಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಸುಮಾರು 10ಗಂಟೆಯ ವೇಳೆಗೆ ಘಟನೆ ಸಂಭವಿಸಿದೆ. ವಿಷಯ ತಿಳಿದಿದ್ದಂತೆ ಚಿರತೆಯನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ನಂತರ ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಚಿರತೆಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದಿದ್ದಾರೆ. ಈ ಭಾಗಗಳಲ್ಲಿ ನೀಲಗಿರಿ ತೋಪುಗಳು ಹೆಚ್ಚಾಗಿರುವುದರಿಂದ ಚಿರತೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತೀವಿ.

Edited By : PublicNext Desk
Kshetra Samachara

Kshetra Samachara

06/12/2024 10:00 am

Cinque Terre

2.02 K

Cinque Terre

0

ಸಂಬಂಧಿತ ಸುದ್ದಿ